HomeKarnatakaಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸಮೀಕ್ಷೆ ಕಾರ್ಯ ಆರಂಭ

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸಮೀಕ್ಷೆ ಕಾರ್ಯ ಆರಂಭ

ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದನ್ವಯ ಸಮೀಕ್ಷೆ ನಡೆಸುವ ಕಾರ್ಯ  ಪ್ರಾರಂಭಗೊಂಡಿದೆ.

ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸ್ಪಷ್ಟ ಚಿತ್ರಣ ಪಡೆಯುವ ಸಲುವಾಗಿ ಫಲಾನುಭವಿಗಳ ಸಮೀಕ್ಷೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

ಸರ್ಕಾರದ ಸೂಚನೆಯಂತೆ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮೀಕ್ಷೆ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸರ್ವೆ ಕಾರ್ಯ ನಡೆಸಲಿದ್ದಾರೆ.  ಮೊಬೈಲ್/ವೆಬ್ ತಂತ್ರಾಂಶದ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಯೋಜನೆಗಳು ತಲುಪಿರುವ ಮತ್ತು ತಲುಪದಿರುವ ಕುಟುಂಬಗಳ ಸರ್ವೆ ಈ ಸಂದರ್ಭದಲ್ಲಿ ಆಗಲಿದೆ.  ಸರ್ಕಾರದ ಯೋಜನೆಗಳು ತಲುಪದ ಕುಟುಂಬಗಳ ಸಂಖ್ಯೆ ಮತ್ತು ಕಾರಣ ತಿಳಿದುಕೊಳ್ಳಲು ಕೂಡ ಈ ಸಮೀಕ್ಷೆ ನೆರವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular