BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ‘ಆರೋಗ್ಯ ಇಲಾಖೆ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆಯ ನಿಯಂತ್ರಣ) ಕಾಯ್ದೆ- 2011, 2013 ಮತ್ತು 2017 ರ ತಿದ್ದುಪಡಿ ಅಧಿನಿಯಮಗಳನ್ವಯ ಕಲಂ-3 ರಲ್ಲಿನ ಹುದ್ದೆಗಳನ್ನು ಹೊರತುಪಡಿಸಿ, 2024-25ನೇ ಸಾಲಿಗೆ ಆಯುಷ್ ಇಲಾಖೆಯ ಉಳಿದ ಗ್ರೂಪ್ ಎ, ಬಿ, ಸಿ ಮತ್ತು ಡಿ ಹುದ್ದೆಗಳಿಗೆ ಸಂಬಂಧಿಸಿದಂತೆ ವೃಂದ ಬಲದ ಶೇಕಡಾವಾರು ಮೀರದಂತೆ ಸಮಾಲೋಚನೆ (counseling) ಮೂಲಕ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಡಿಸಿ, ವರ್ಗಾವಣಾ ಪ್ರಕ್ರಿಯೆಯನ್ನು ಕೈಗೊಂಡು, ಆಗಸ್ಟ್ 31, 2024ರೊಳಗಾಗಿ ಪೂರ್ಣಗೊಳಿಸುವಂತೆ ತಿಳಿಸಲು ಸರ್ಕಾರದ ಅಧೀನ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read