HomeLatest Newsಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಸಿಮೆಂಟ್ ದರ ಇಳಿಕೆ

ಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಸಿಮೆಂಟ್ ದರ ಇಳಿಕೆ

ನವದೆಹಲಿ: ಜಿಎಸ್‌ಟಿ ಪರಿಷ್ಕರಣಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ದರ ಪರಿಷ್ಕರಣೆ ಜಾರಿಯಾಗಲಿದ್ದು, ಉತ್ಪನ್ನಗಳ ಬೆಲೆ ಇಳಿಕೆ ಪ್ರಮಾಣದ ಬಗ್ಗೆ ಚರ್ಚೆ ನಡೆದಿದೆ.

50 ಕೆಜಿ ಸಿಮೆಂಟ್ ಚೀಲದ ದರದಲ್ಲಿ 30 ರಿಂದ 35 ರೂ.ವರೆಗೂ ಇಳಿಕೆಯಾಗಬಹುದು ಎಂದು ಇಂಡಿಯಾ ರೇಟಿಂಗ್ಸ್ ಅಂಡ್ ರಿಸರ್ಚ್ ಸಂಸ್ಥೆ ಅಂದಾಜಿಸಿದೆ. ಸಿಮೆಂಟ್ ಗೆ ಈ ಮೊದಲು ಶೇಕಡ 28 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಸೆಪ್ಟೆಂಬರ್ 22 ರಿಂದ ಜಾರಿಗೆ ಬರುವಂತೆ ಸಿಮೆಂಟ್ ಗೆ ಶೇಕಡ 18 ಜಿಎಸ್‌ಟಿ ವಿಧಿಸಲಾಗುವುದು. ಇದರಿಂದ ಸಹಜವಾಗಿಯೇ ಬೆಲೆ ಕಡಿಮೆಯಾಗಲಿದೆ.

ಸಿಮೆಂಟ್ ಬೇಡಿಕೆಯ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತದೆ. ಸೆ. 22ರಿಂದ 50 ಕೆಜಿ ಸಿಮೆಂಟ್ ಚೀಲದ ದರ 30 ರಿಂದ 35 ರೂ.ವರೆಗೂ ಇಳಿಯಬಹುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕೃಷಿ, ಹೈನುಗಾರಿಕೆಗೆ ಸಂಬಂಧಿಸಿದ ಬಹುತೇಕ ಉತ್ಪನ್ನಗಳಿಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಲಾಗಿದ್ದು, ಗ್ರಾಮೀಣ ಆರ್ಥಿಕತೆಗೂ ಭಾರಿ ಉತ್ತೇಜನ ಸಿಗಲಿದೆ. ಜಿಎಸ್‌ಟಿ ಸರಳೀಕರಣದಿಂದ ಮುಂದಿನ ಹಣಕಾಸು ವರ್ಷದಲ್ಲಿ ದೇಶದಲ್ಲಿ ಚಿಲ್ಲರೆ ಹಣದುಬ್ಬರ ಇಳಿಕೆಯಾಗಲಿದ್ದು, ಗ್ರಾಹಕರ ಅನುಭೋಗ ಹೆಚ್ಚುತ್ತದೆ. ಗುಣಮಟ್ಟದ ಸರಕುಗಳ ಬೇಡಿಕೆ ಕೂಡ ಹೆಚ್ಚಾಗಲಿದೆ. ಮನೆ ಬಳಕೆಯ ಅಗತ್ಯ ವಸ್ತುಗಳು ಮತ್ತು ಸೇವೆಗಳ ಮೇಲಿನ ತೆರಿಗೆ ಭಾರ ಕಡಿಮೆಯಾಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular