HomeLatest Newsಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಪ್ರತಿ ಟನ್ ಮರಳಿಗೆ 850 ರೂ. ನಿಗದಿ

ಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಪ್ರತಿ ಟನ್ ಮರಳಿಗೆ 850 ರೂ. ನಿಗದಿ

ದಾವಣಗೆರೆ: ಸರ್ಕಾರ ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಸೆಂಬರ್ ಅಂತ್ಯಕ್ಕೆ ಮರಳು ಲಭ್ಯ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಹಲವು ದೂರುಗಳು ಕೇಳಿ ಬರುತ್ತಿವೆ. ಹಾಗಾಗಿ ಅಂತವರ ಮೇಲೆ ಕಾನೂನಾತ್ಮಕ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೆಯೇ ನಿಯಮಾನುಸಾರ ವೇ-ಬ್ರಿಡ್ಜ್ ಗಳಲ್ಲಿ ತೂಕ ನಿರ್ದಿಷ್ಟವಾಗಿದ್ದರೂ, ತದನಂತರ ನಿಗದಿತ ತೂಕಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಣೆ ಮಾಡಲಾಗುತ್ತಿದೆ. ಅಲ್ಲದೇ ವಾಹನಗಳ ಮೇಲ್ಪದರಗಳಲ್ಲಿ ಎಂಸ್ಯಾಂಡ್ ಮತ್ತು ಮಧ್ಯ ಭಾಗದಲ್ಲಿ ಮರಳು ತುಂಬಿ, ಎಂಸ್ಯಾಂಡ್ ರೂಪದಲ್ಲಿ ಮರಳು ಸಾಗಾಣೆ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಈ ಕುರಿತು ಸೂಕ್ಷ್ಮವಾಗಿ ಗಮನಿಸಿ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರ ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿದೆ. ಜಿಲ್ಲೆಯಲ್ಲಿ 24 ಮರಳು ಬ್ಲಾಕ್ ಗಳನ್ನು ಗುರುತಿಸಿ ಟೆಂಡರ್ ಅಂತಿಮಗೊಳಿಸಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.

19 ಮರಳು ಬ್ಲಾಕ್‍ ಗಳಿಗೆ ಟೆಂಡರ್:

ಜಿಲ್ಲಾದ್ಯಂತ ಒಟ್ಟು 24 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ 4 ಬ್ಲಾಕ್ ಸರ್ಕಾರಿ ಕಾಮಗಾರಿಗಳಿಗೆ, 19 ಬ್ಲಾಕ್ ಗಳು ಸಾರ್ವಜನಿಕ ಉಪಯೋಗಕ್ಕೆ ನಿಗದಿಪಡಿಸಿದ್ದು, ಟೆಂಡರ್ ಅಂತಿಮವಾಗಿದೆ. ಇನ್ನೂ ಒಂದು ಬ್ಲಾಕ್ ಮಾತ್ರ ಬಾಕಿ ಇದೆ. ಟೆಂಡರ್ ದಾರರು ಷರತ್ತುಗಳನ್ವಯ ಮರಳು ಪೂರೈಕೆ ಮಾಡಲಾಗುತ್ತದೆ.

ಬ್ಲಾಕ್ ವಿವರ:

ಹರಿಹರ ತಾಲ್ಲೂಕಿನ ಗೋವಿನಾಳು, ಎಲೆಹೊಳೆ, ಚಿಕ್ಕಬಿದರೆ, ಗುತ್ತೂರು, ಮಳಲಹಳ್ಳಿ ಹಾಗೂ ಬಿಲಾಸನೂರು, ಹೊನ್ನಾಳಿ ತಾಲ್ಲೂಕಿನ ಬುಳ್ಳಾಪುರ, ಚಿಕ್ಕಬಸಾಪುರ, ರಾಂಪುರ, ಬಿಳೆಮಲ್ಲೂರು, ಹಿರೇಬಸೂರು, ಬುಳ್ಳಾಪುರ, ಬೀರಗೊಂಡನಹಳ್ಳಿ ಮತ್ತು ಬಾಗೇವಾಡಿ ವ್ಯಾಪ್ತಿಯಲ್ಲಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಗೋವಿನಕೋವಿ, ಮಾರಿಗೊಂಡನಹಳ್ಳಿ, ತಗ್ಗಿಹಳ್ಳಿ ಮತ್ತು ಕೋಟೆಹಾಳ್‍ನಲ್ಲಿ ಮರಳು ಬ್ಲಾಕ್ ಗುರುತಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular