HomeKarnatakaಮನೆಕಟ್ಟೋರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಶೀಘ್ರವೇ `ಮರಳು ನೀತಿ' ಜಾರಿ|Sand Policy

ಮನೆಕಟ್ಟೋರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಶೀಘ್ರವೇ `ಮರಳು ನೀತಿ’ ಜಾರಿ|Sand Policy

ದಾವಣಗೆರೆ : ಮನೆಕಟ್ಟೋರಿಗೆ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಜನರಿಗೆ ಕೈಗೆಟಕುವ ದರದಲ್ಲಿ ಸುಲಭವಾಗಿ ಮರಳು ಲಭ್ಯವಾಗುವಂತೆ ಮರಳು ನೀತಿ ಜಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.

ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ, ಜನರಿಗೆ ಕೈಗೆಟುಕುವ ದರದಲ್ಲಿ ಸುಲಭವಾಗಿ ಮರಳು ಲಭ್ಯವಾಗುವಂತೆ ಮಾಡಲು ಮರಳು ನೀತಿ ಜಾರಿಗೆ ತರಲಾಗುವುದು. ಈ ಹಿಂದೆ ಎಂ ಸ್ಯಾಂಡ್ ಬಗ್ಗೆ ಜನರ ಅಭಿಪ್ರಾಯ ಬೇರೆಯಾಗಿತ್ತು. ಈಗ ಎಲ್ಲರೂ ಅದಕ್ಕೆ ಒಗ್ಗಿಕೊಂಡಿದ್ದಾರೆ. ಹಂತ ಹಂತವಾಗಿ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular