ಗೃಹರಕ್ಷಕ ದಳ ಸಿಬ್ಬಂದಿಗೆ ಗುಡ್ ನ್ಯೂಸ್: ಪೊಲೀಸರ ಮಾದರಿಯಲ್ಲಿ ಜನ್ಮದಿನಕ್ಕೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕ ದಳ ಸಿಬ್ಬಂದಿಗೆ ಇನ್ನು ಮುಂದೆ ಪೊಲೀಸರ ಮಾದರಿಯಲ್ಲಿ ಅವರ ಹುಟ್ಟುಹಬ್ಬದ ದಿನ ಶುಭಾಶಯ ಪತ್ರ ಹಾಗೂ ವೇತನ ಸಹಿತ ರಜೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

 ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದ ಮೈದಾನದಲ್ಲಿ ಶುಕ್ರವಾರ ಮೊದಲ ಬಾರಿಗೆ ನಡೆದ ಗೃಹರಕ್ಷಕ ದಳ ಸಿಬ್ಬಂದಿ ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೊದಲ ಬಾರಿಗೆ ಸಂಪೂರ್ಣವಾಗಿ ಗೃಹರಕ್ಷಕ ದಳ ಸಿಬ್ಬಂದಿಯಿಂದ ಕವಾಯತು ನಡೆದಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ವಲಯಗಳಲ್ಲಿ ದೈಹಿಕ ಸ್ವಾಸ್ಥ್ಯದ ಜೊತೆಗೆ ಮಾನಸಿಕ ಸ್ವಾಸ್ಥ್ಯ ಮುಖ್ಯವಾಗಿದ್ದು, ಕಾರ್ಯನಿರ್ವಹಣೆಯಿಂದ ಮಾನಸಿಕ ಒತ್ತಡ, ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಇದನ್ನು ನಿವಾರಿಸಲು ನಗರ ಪೊಲೀಸ್ ವತಿಯಿಂದ ಐದಾರು ಮಂದಿ ಆಪ್ತ ಸಮಾಲೋಚಕರು ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತರಬೇತಿ ನೀಡುತ್ತಿದ್ದಾರೆ. ಇನ್ನು ಮುಂದೆ ಗೃಹರಕ್ಷಕ ದಳ ಸಿಬ್ಬಂದಿಗೂ ನಿಯಮಿತವಾಗಿ ಆಪ್ತ ಸಮಾಲೋಚನೆ ನಡೆಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read