ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್‌ ನ್ಯೂಸ್‌ : 3 ಲಕ್ಷ ಮನೆಗಳ ನಿರ್ಮಾಣಕ್ಕೆ ತೀರ್ಮಾನ

ಬೆಂಗಳೂರು : ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಮಾಡಲು ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಕುರಿತು ಸಿಎಂ ಸಿದ್ದರಾಮಯ್ಯ, ನಾಡಿನ ವಸತಿ ರಹಿತ ಕುಟುಂಬಗಳಿಗೆ ನೆಮ್ಮದಿಯ ಸೂರು ಒದಗಿಸುವುದು ನಮ್ಮ ಗುರಿ. ಕಳೆದ ಆರು ತಿಂಗಳ ಅವಧಿಯಲ್ಲಿ 88 ಸಾವಿರಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಡಲಾಗಿದೆ, ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕಾರ್ಯಪ್ರವೃತ್ತವಾಗಿದೆ ಎಂದರು.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ  ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read