HomeKarnatakaವಸತಿ ರಹಿತರಿಗೆ ಗುಡ್ ನ್ಯೂಸ್ : ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಕ್ರಮ

ವಸತಿ ರಹಿತರಿಗೆ ಗುಡ್ ನ್ಯೂಸ್ : ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಕ್ರಮ

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಳಗೇರಿ ಅಭಿವೃದ್ಧಿ ಮಂಡಳಿ  ಮತ್ತು ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸುತ್ತಿರುವ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ  ನಿಟ್ಟಿನಲ್ಲಿ ಅಗತ್ಯ ಆರ್ಥಿಕ ನೆರವು ಒದಗಿಸಲು ಸಿಎಂ ಸಮ್ಮತಿಸಿದ್ದಾರೆ. ಹತ್ತು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ  ವಸತಿ ಯೋಜನೆಗಳನ್ನು ವರ್ಷದೊಳಗೆ ಪೂರ್ಣಗೊಳಿಸಿ ಹಂಚಿಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಪೂರ್ಣಗೊಳಿಸಲು 500 ಕೋಟಿ ರೂ. ಸಾಲದ ವ್ಯವಸ್ಥೆ ಮಾಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular