HomeLatest News‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಮತ್ತೆ ಎರಡು ಕಂತಿನ ಹಣ ಬಿಡುಗಡೆ

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಮತ್ತೆ ಎರಡು ಕಂತಿನ ಹಣ ಬಿಡುಗಡೆ

ಕೊಪ್ಪಳ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮತ್ತೆ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು.

ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ. ಅದನ್ನೇ ಮತ್ತೆ ಮತ್ತೆ ಕೇಳಿ ನನಗೆ ಎಲ್ಲ ತಿಳಿದಿದೆ ಎನ್ನುವಂತೆ ಶಾಸಕ ಮಹೇಶ್ ಟೆಂಗಿನಕಾಯಿ ವರ್ತಿಸುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲದ ಕಾರಣ ಉತ್ತರ ಕೊಟ್ಟ ಮೇಲೆಯೂ ಪದೇ ಪದೇ ಕೇಳುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular