HomeLatest Newsಬಿಸಿಯೂಟ ನೌಕರರಿಗೆ ಸಿಹಿ ಸುದ್ದಿ: ಮಾಸಿಕ ಗೌರವ ಸಂಭಾವನೆ 1 ಸಾವಿರ ರೂ. ಹೆಚ್ಚಳ

ಬಿಸಿಯೂಟ ನೌಕರರಿಗೆ ಸಿಹಿ ಸುದ್ದಿ: ಮಾಸಿಕ ಗೌರವ ಸಂಭಾವನೆ 1 ಸಾವಿರ ರೂ. ಹೆಚ್ಚಳ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ಒಂದು ಸಾವಿರ ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

2025- 26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಈ ಬಗ್ಗೆ ಘೋಷಣೆ ಮಾಡಿತ್ತು. ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡುವ ಮಾಸಿಕ ಗೌರವ ಸಂಭಾವನೆ ಹೆಚ್ಚಳ ಮಾಡಲಾಗಿದೆ.

ಮುಖ್ಯ ಅಡುಗೆಯವರಿಗೆ ಮಾಸಿಕ ಗೌರವ ಧನವನ್ನು 3700 ರೂ.ನಿಂದ 4,700 ರೂ.ಗೆ, ಅಡುಗೆ ಸಹಾಯಕರಿಗೆ 3600 ರೂ.ನಿಂದ 4,600 ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular