HomeKarnatakaಮನೆಯ ಯಜಮಾನಿಯರಿಗೆ ಗುಡ್ ನ್ಯೂಸ್ : ಶೀಘ್ರವೇ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆ

ಮನೆಯ ಯಜಮಾನಿಯರಿಗೆ ಗುಡ್ ನ್ಯೂಸ್ : ಶೀಘ್ರವೇ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನೂ ನಾಲ್ಕೈದು ದಿನಗಳಲ್ಲಿ ಆ್ಯಪ್ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ಬಗ್ಗೆ ವಿಧಾನಪರಿಷತ್ ನಲ್ಲಿ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ನಾಲ್ಕೈದು ದಿನಗಳಲ್ಲಿ ಆ್ಯಪ್ ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಯಾವಾಗಿನಿಂದ ಆರಂಭವಾಗಲಿದೆ ಎಂದು ದಿನಾಂಕ ಪ್ರಕಟಿಸಲಾಗುವುದು. ಆಗಸಟ್ 16 ರಂದು ನೇರ ನಗದು ವರ್ಗಾವಣೆ ಮೂಲಕ 2,000 ರೂ. ಗ್ಯಾರಂಟಿ ಹಣ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಿದ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 16 ರಂದು 2,000 ರೂ. ಹಣ ಪಾವತಿಸುವ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular