HomeKarnatakaಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರದಿಂದ 4600 ಕೋಟಿ ರೂ.ಅನುದಾನ ಬಿಡುಗಡೆ

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರದಿಂದ 4600 ಕೋಟಿ ರೂ.ಅನುದಾನ ಬಿಡುಗಡೆ

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಯಜಮಾನಿಗೆ 2000 ರೂ ನೀಡುವ ಸಲುವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ.

ಮೊದಲ ಕಂತಿನ ಹಣ 4600 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಗೃಹಲಕ್ಷ್ಮಿ ಯೋಜನೆ ಅನುಷ್ಟಾನಕ್ಕಾಗಿ 2023-24 ನೇ ಸಾಲಿಗೆ 17,500 ರೂ ಕೋಟಿ ರೂ ನಿಗದಿ ಮಾಡಲಾಗಿದೆ. ಮೊದಲ ಕಂತು 4,375 ಕೋಟಿ ರೂ ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ವಿವಿಧ ಷರತ್ತಿಗೊಳಪಟ್ಟು 4600 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅರ್ಜಿ ಸಲ್ಲಿಸಿದ ಎಲ್ಲಾ ಮನೆ ಯಜಮಾನಿಯರಿಗೂ ಪ್ರತಿ ತಿಂಗಳು 2000 ರೂ ಹಣ ಜಮಾ ಆಗಲಿದೆ. ಸ್ವಲ್ಪ ತಡವಾಗಬಹುದು, ಆದರೆ ಎಲ್ಲಾ ಫಲಾನುಭವಿಗಳಿಗೂ ಹಣ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular