HomeLatest NewsGOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : 'ಗೃಹಲಕ್ಷ್ಮಿ' ಯೋಜನೆಯ 24 ನೇ ಕಂತಿನ...

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಯ 24 ನೇ ಕಂತಿನ ಹಣ ಖಾತೆಗೆ ಜಮಾ

ಬೆಂಗಳೂರು : ಹೊಸ ವರ್ಷಕ್ಕೆ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ.

ಹೌದು, ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ 2000 ರೂ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಖಾತೆಗೆ ಹಣ ಬಂದಿದ್ಯೋ ಎಂಬುದು ಗೊತ್ತಿಲ್ಲ. ಆದರೆ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಈ ಹಿನ್ನೆಲೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಹಣ ತಿಂಗಳಿಗೊಮ್ಮೆ ಬಿಡುಗಡೆಯಾಗಬೇಕಾಗಿದ್ದರೂ, ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದಾಗಿ ಒಂದೇ ಬಾರಿ ಎರಡು ಅಥವಾ ಮೂರು ತಿಂಗಳ ಹಣವೂ ಜಮಾ ಆಗುತ್ತಿದೆ.
ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದರು.
ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು . 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular