HomeLatest Newsಒಳ ಮೀಸಲಾತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಜಾತಿ ಪ್ರಮಾಣ ಪತ್ರ ಸಾಫ್ಟ್ವೇರ್ ರೆಡಿ: ನ. 10...

ಒಳ ಮೀಸಲಾತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಜಾತಿ ಪ್ರಮಾಣ ಪತ್ರ ಸಾಫ್ಟ್ವೇರ್ ರೆಡಿ: ನ. 10 ರಿಂದ ಕಾರ್ಯಾರಂಭ

ಬೆಂಗಳೂರು: ಜಾತಿ ಪ್ರಮಾಣ ಪತ್ರ ನೀಡುವ ಸಾಫ್ಟ್ವೇರ್ ಸಿದ್ಧಪಡಿಸಲಾಗಿದ್ದು, ನವೆಂಬರ್ 10 ರಂದು ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.

ಸರ್ಕಾರ ಒಳ ಮೀಸಲಾತಿ ಜಾರಿ ಕುರಿತು ಆದೇಶಿಸಿದ್ದರೂ ಅನುಷ್ಠಾನಕ್ಕೆ ಅಗತ್ಯವಿರುವ ಪ್ರಮಾಣ ಪತ್ರ ವಿತರಿಸಲು ವ್ಯವಸ್ಥೆ ಸಿದ್ಧವಾಗಿರಲಿಲ್ಲ. ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಇ- ಆಡಳಿತ ಇಲಾಖೆ ತಂತ್ರಾಂಶವನ್ನು ಸಿದ್ಧಪಡಿಸಿದ್ದು ಪ್ರಯೋಗ ನಡೆಯುತ್ತಿತ್ತು.

ಈ ನಡುವೆ ಒಳ ಮೀಸಲಾತಿ ಸೌಲಭ್ಯದಲ್ಲಿ ವೈದ್ಯಕೀಯ ಸೀಟು ಪಡೆಯಲು ಜಾತಿ ಪ್ರಮಾಣ ಪತ್ರ ಮಂಡಿಸಬೇಕೆಂಬ ಆದೇಶ 15 ದಿನಗಳಿಂದಲೂ ಗೊಂದಲ, ಆತಂಕ ಮೂಡಿಸಿದ್ದು, ಈಗಾಗಲೇ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ. ಅಧಿಕೃತವಾಗಿ ಮಾದಿಗ, ಛಲವಾದಿ ಸಮುದಾಯದವರು ತಾವು ಯಾವ ಗುಂಪಿಗೆ ಸೇರಿದ್ದೇವೆ ಎಂಬ ಕುರಿತು ಪ್ರಮಾಣ ಪತ್ರ ಪಡೆದುಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾದಿಗ ಮೂಲ ಜಾತಿಯವರು ಜಾತಿ ಸೂಚಕ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರಕ್ಕೆ ಸೇರಿದವರು ಆಗಿದ್ದರೆ ಪ್ರವರ್ಗ ಎ, ವಲಯ ಮೂಲ ಜಾತಿಯವರು ಜಾತಿ ಸೂಚಕ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರಕ್ಕೆ ಸೇರಿದವರಾಗಿದ್ದರೆ ಪ್ರವರ್ಗ ಬಿ ಎಂದು ಪ್ರಮಾಣ ಪತ್ರ ಪಡೆದುಕೊಳ್ಳಬಹುದಾಗಿದೆ.

ಈ ಪ್ರಮಾಣ ಪತ್ರ ಪಡೆದವರು ಒಳ ಮೀಸಲಾತಿ ಅಡಿ ಶಿಕ್ಷಣ, ಉದ್ಯೋಗ, ಸಾಲ, ಮನೆ, ಕೊಳವೆ ಬಾವಿ ಸೇರಿ ಎಲ್ಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಮಾದಿಗ ಸಮುದಾಯದವರು ತಮ್ಮ ಕೇಂದ್ರಗಳಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಪ್ರವರ್ಗ ಗುಂಪಿನ ಪ್ರಮಾಣ ಪತ್ರ ಪಡೆದು ಒಳ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳುವಂತೆ ಮಾಜಿ ಸಚಿವ ಹೆಚ್. ಆಂಜನೇಯ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular