HomeKarnatakaಐಟಿಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಅಪ್ರೆಂಟಿಸ್‌ ಶಿಪ್ ತರಬೇತಿಗೆ ಕ್ಯಾಂಪಸ್ ಸಂದರ್ಶನ

ಐಟಿಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಅಪ್ರೆಂಟಿಸ್‌ ಶಿಪ್ ತರಬೇತಿಗೆ ಕ್ಯಾಂಪಸ್ ಸಂದರ್ಶನ

ಕೊಪ್ಪಳ: ಕೊಪ್ಪಳ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ), ಕುಷ್ಟಗಿ ರಸ್ತೆ, ಟಣಕನಕಲ್ ಇಲ್ಲಿ ಮೇ 27 ರಂದು ಬೆಳಿಗ್ಗೆ 8 ಗಂಟೆಗೆ ಹೋಂಡಾ ಮೋಟಾರ್ಸ್ ಪಿವಿಟಿ ಲಿಮಿಟೆಡ್ ನರಸಾಪುರ ಇವರ ವತಿಯಿಂದ ಐಟಿಐ ಪಾಸ್ ಆದ ಹಾಗೂ ಪ್ರಸ್ತುತ ಐಟಿಐ ಎರಡನೇ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ತರಬೇತಿದಾರರಿಗೆ ಶಿಶಿಕ್ಷು(ಅಪ್ರೆಂಟಿಸ್‌ಶಿಪ್) ಗಾಗಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ.

ಕ್ಯಾಂಪಸ್ ಸಂದರ್ಶನದಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತಿದಾರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಸಕ್ತರು ತಮ್ಮ ಆಧಾರಕಾರ್ಡ, ಪೋಟೊ ವಿದ್ಯಾರ್ಹತೆಗೆ ಸಂಬಂದಿಸಿದ ಎಲ್ಲಾ ಮೂಲ ದಾಖಲಾತಿಗಳ ಜೋತೆಗೆ 2 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಈ ಸಂದರ್ಶನಕ್ಕೆ ಹಾಜರಾಗಬೇಕು.

 ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ(ಟಣಕನಕಲ್, ಕುಷ್ಟಗಿ ರಸ್ತೆ ಕೊಪ್ಪಳ) ಮೊ.ಸಂ: 9449330436, 9448813422, 9945577155, 9742532353, 9945672606 ಮತ್ತು 9964780198 ಗೆ ಸಂರ್ಕಿಸಬಹುದು ಎಂದು ಕೊಪ್ಪಳ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಹಾಗೂ ಜಿಲ್ಲಾ ನೂಡಲ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular