HomeKarnatakaJOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಗ್ರಾ.ಪಂಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳ...

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಗ್ರಾ.ಪಂಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗ್ರಾ.ಪಂಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಉಲ್ಲೇಖ (1) ರಲ್ಲಿ ನಿರ್ದೇಶಿಸಿರುವಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳತಕ್ಕದ್ದು ಹಾಗೂ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನವನ್ನು ಪಾವತಿಸಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು ಸೂಚನೆ ನೀಡಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ, ಮತ್ತು ಇತರೆ ಸೇವಾ ಷರತ್ತುಗಳು ನಿಯಮಗಳು) 2020ರಂತೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಾತಿ ವಿಧಾನ, ವಿದ್ಯಾರ್ಹತೆ, ಆಯ್ಕೆ ಸಮಿತಿ ನಿಗದಿಪಡಿಸಿ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular