HomeKarnatakaBIGG NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಹಂತ ಹಂತವಾಗಿ ರಾಜ್ಯ ಸರ್ಕಾರದಿಂದ 2.40...

BIGG NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಹಂತ ಹಂತವಾಗಿ ರಾಜ್ಯ ಸರ್ಕಾರದಿಂದ 2.40 ಲಕ್ಷ ಹುದ್ದೆಗಳ ಭರ್ತಿ

ಕಲಬುರಗಿ : ರಾಜ್ಯದಲ್ಲಿ ಗೃಹ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸೇರಿದಂತೆ ಸುಮಾರು 2.40 ಲಕ್ಷ ಹುದ್ದೆಗಳು ಖಾಲಿ ಇದ್ದು, ಈ ಎಲ್ಲ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಈ ವಿಚಾರದಲ್ಲಿ ಸರ್ಕಾರ ತನ್ನ ಬದ್ಧತೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯ ಸರ್ಕಾರ ಕೇವಲ ನಿರುದ್ಯೋಗ ಭತ್ಯೆ ನೀಡುವುದರ ಜೊತೆಗೆ ಕೌಶಲ್ಯ ಅಭಿವೃದ್ದಿಗೂ ಒತ್ತು ನೀಡಲಿದ್ದು, ಉತ್ಕೃಷ್ಟ ಮಟ್ಟದ ಮಾನವ ಸಂಪನ್ಮೂಲ ಉತ್ಪನ್ನ ಮಾಡುವ ನಿಟ್ಟಿನಲ್ಲಿ ಕೌಶಲ್ಯ ಸಲಹಾ ಸಮಿತಿ ರಚನೆ ಮಾಡಿದ್ದು, ನಾನಷ್ಟೇ ಅಲ್ಲದೇ ಸಚಿವ ಶರಣಪ್ರಕಾಶ ಪಾಟೀಲ್ ಅವರು ಸಹ ಈ ಸಮಿತಿಯಲ್ಲಿದ್ದು ಕರ್ನಾಟಕ ಕೌಶಲ್ಯ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸುವ ಅಭ್ಯರ್ಥಿಗಳಿಗೆ ಖಾಸಗಿ ಅಥವಾ ಸರ್ಕಾರದ ಸಹಯೋಗದೊಂದಿಗಿನ ಸಂಸ್ಥೆಗಳ ಮೂಲಕ ಸೂಕ್ತ ಕೌಶಲ್ಯ ತರಬೇತಿ ನೀಡಲಾಗುವುದು. ಆ ಮೂಲಕ ಅಂತಹ ಅಭ್ಯರ್ಥಿಗಳು ಕೆಲಸ ಪಡೆದುಕೊಳ್ಳುವಲ್ಲಿ ಅನುಕೂಲವಾಗುವಂತಹ ವಾತಾವರಣ ನಿರ್ಮಾಣ ಮಾಡಲಾಗುವುದು ಎಂದರು.

ರಾಜ್ಯದಲ್ಲಿರುವ ರಾಜ್ಯ ಹೆದ್ದಾರಿಗಳ ಅಭಿವೃದ್ದಿಗಾಗಿ ₹ 9000 ಕೋಟಿ ಅನುದಾನ ಮೀಸಲಿರಿಸುವ ನಿರ್ಣಯವನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ಲೋಕೋಪಯೋಗಿ ಇಲಾಖೆ ಸಚಿವರು ಈ ಕುರಿತು ಕ್ರಮವಹಿಸಲಿದ್ದಾರೆ. ಜಿಲ್ಲೆಯಲ್ಲಿನ ಹದಗೆಟ್ಟ ರಸ್ತೆಗಳ ಅಭಿವೃದ್ದಿಗೆ ಇದು ಸಹಕಾರಿಯಾಗಲಿದೆ.
ಜನವರಿ ಕೊನೆಯಲ್ಲಿ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದ್ದು, ನಂತರ ಪ್ರಾದೇಶಿಕ, ಜಿಲ್ಲಾ ಮಟ್ಟದಲ್ಲಿಯೂ ಸಹ ಉದ್ಯೋಗ ಮೇಳ ಆಯೋಜಿಸಲಾಗುವುದು. ಕರ್ನಾಟಕ ಕೌಶಲ್ಯ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿದ ಅಭ್ಯರ್ಥಿಗಳು ಕೂಡಾ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು  ಎಂದು ಅವರು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಜನವರಿ 9 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲಬುರಗಿ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆ ಆಲಿಸಲು ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿಂದೆ ಚಿಂಚೋಳಿಯಲ್ಲಿ ಜರುಗಿದ ಜನಸ್ಪಂದನ ಕಾರ್ಯಕ್ರಮದಲ್ಲಿ 612 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅವುಗಳಲ್ಲಿ 606 ಅರ್ಜಿಗಳ ವಿಲೇವಾರಿ ಮಾಡಲಾಗಿದ್ದು, 6 ಅರ್ಜಿಗಳು ಬಾಕಿ ಇವೆ ಎಂದು ಅವರು ತಿಳಿಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular