ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 2.50 ಲಕ್ಷ ರಾಜ್ಯ ಸರ್ಕಾರಿ ಹುದ್ದೆಗಳ ಭರ್ತಿ

ಕಲಬುರಗಿ : ರಾಜ್ಯ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 2.50 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ತಿಳಿಸಿದ್ದಾರೆ.

ಡಿ.ಸಿ. ಕಚೇರಿ ಸಭಾಂಗಣದಲ್ಲಿ ಕಲಬುರಗಿ‌ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ‌ ಸಭೆ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಪೂರ್ವ ನಮ್ಮ ಪಕ್ಷ ಪ್ರಾಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಂತ ಹಂತವಾಗಿ ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಶಿಕ್ಷಕರ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ, ನ್ಯಾಯಾಲಯದ‌ ತೀರ್ಪಿನಂತೆ ಕ್ರಮ‌ ವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read