ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಸಡಿಲಿಕೆ ಮಾಡಲಾಗಿದೆ.
31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ನಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.
ಮೇಲೆ (1) ರಲ್ಲಿ ಓದಲಾದ ದಿನಾಂಕ 25.11 2024ರ. ದಿನಾಂಕ 29.03.2025ರ ಮತ್ತು ದಿನಾಂಕ 11.04.2025ರ ಸರ್ಕಾರದ ಸುತ್ತೋಲೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ದಿನಾಂಕ: 28-10-2024 ರಿಂದ ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿರುತ್ತದೆ.
ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ- ಎ. ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ. ಮುಂದುವರೆದು. ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತದೆ.
ಮೇಲ್ಕಂಡ ಹಿನ್ನಲೆಯಲ್ಲಿ, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ನೀಡಲು ತೀರ್ಮಾನಿಸಿ. ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ನಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.

