ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಸರ್ವೇಯರ್ ಸೇರಿ 2,000 ಹುದ್ದೆಗಳ ಭರ್ತಿಗೆ ಪ್ರಸ್ತಾವನೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸರ್ವೇಯರ್‌ ಸೇರಿದಂತೆ 2,000 ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಕಂದಾಯ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.

ರಾಜ್ಯದಲ್ಲಿ ಖಾಲಿ ಇರುವ ಸರ್ವೇಯರ್‌, ಡಿಡಿಎಲ್‌ ಆರ್.‌ ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಸಿಎಂ ಸಿದ್ದರಾಮಯ್ಯಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

500 ಡಿಡಿಎಲ್‌ ಆರ್‌,1,500ಸರ್ವೇಯರ್‌ ಹಾಗೂ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ 2024-25 ನೇ ಸಾಲಿನ ಬಜೆಟ್‌ ನಲ್ಲಿ ವಿಶೇಷ ಅನುದಾನ ಮೀಸಲಿಡುವ ಬಗ್ಗೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ.

ಸರ್ವೇಯರ್ ಮತ್ತು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶೀಘ್ರ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿ ಚರ್ಚಿಸಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read