HomeKarnatakaಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 2000 ಬೋಧಕರ ಹುದ್ದೆ ಭರ್ತಿ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 2000 ಬೋಧಕರ ಹುದ್ದೆ ಭರ್ತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 2000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.

2025- 26 ನೇ ಸಾಲಿನ ಬಜೆಟ್ ಘೋಷಣೆಯಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್ ಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಮತ್ತು ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಿ ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿ ಪ್ರಜೀತ್ ಕೆ.ಎಂ. ನಂಬಿಯಾರ್ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ವಿಷಯಗಳ 826, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 941, ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 186, ಬೆಂಗಳೂರಿನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 47 ಬೋಧಕರ ಹುದ್ದೆಗಳನ್ನು ಭರ್ತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಆರ್ಥಿಕ ಇಲಾಖೆ ಅನುಮತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಲಿ ಹುದ್ದೆ ಭರ್ತಿ ಮಾಡಿಕೊಳ್ಳುವ ಜೊತೆಗೆ ಅಗತ್ಯವಿದ್ದಲ್ಲಿ ಹೊಸ ಹುದ್ದೆಗಳ ಸೃಜನೆ ಮತ್ತು ಅಂತಹ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸುವಂತೆ ಆರ್ಥಿಕ ಇಲಾಖೆ ಸೂಚಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular