HomeKarnatakaಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 2,354 ಸರ್ವೇಯರ್, 1,700 ಗ್ರಾಮ ಲೆಕ್ಕಿಗರ ನೇಮಕ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 2,354 ಸರ್ವೇಯರ್, 1,700 ಗ್ರಾಮ ಲೆಕ್ಕಿಗರ ನೇಮಕ

ಶಿವಮೊಗ್ಗ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ 2,354 ಸರ್ವೇಯರ್, 1,700 ಗ್ರಾಮ ಲೆಕ್ಕಿಗರ ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗದ್ದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ವೇಯರ್‍ಗಳ ಕೊರತೆ ಹೆಚ್ಚಿದೆ. ಆದ್ದರಿಂದ ಸರ್ವೇ ಇಲಾಖೆ ವಯಿತಿಯಿಂದ 2000 ಲೈಸೆನ್ಸ್ಡ್ ಸರ್ವೇಯರ್ ಮತ್ತು 354 ಸರ್ಕಾರಿ ಸರ್ವೇಯರ್ ನೇಮಕಕ್ಕೆ ಸೂಚಿಸಲಾಗಿದ್ದು, ಜಿಲ್ಲೆಗೆ ಅಗತ್ಯವಾದ ಸರ್ವೇಯರ್‍ಗಳನ್ನು ಅಕ್ಕಪಕ್ಕದ ಜಿಲ್ಲೆಯಿಂದ ಒದಗಿಸಲು ಹಾಗೂ ಹೊಸದಾಗಿ ನೇಮಕಗೊಂಡ ಸರ್ವೇಯರ್ ನಿಯೋಜಿಸುವಂತೆ ಇಲಾಖೆ ಆಯುಕ್ತರಿಗೆ ತಿಳಿಸಿದ್ದೇನೆ. ಹಾಗೂ 1500 ರಿಂದ 1700 ಗ್ರಾಮ ಲೆಕ್ಕಿಗರನ್ನು ನೇಮಕ ಮಾಡಲು ಸೂಚಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ-ಆಫೀಸ್ ಅನುಷ್ಟಾನ: ಆಡಳಿತದಲ್ಲಿ ವೇಗ ಮತ್ತು ಪಾರದರ್ಶಕತೆ ತರಲು ಹಾಗೂ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಇ-ಆಫೀಸ್ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ತಹಶೀಲ್ದಾರ್ ಕಚೇರಿಯಿಂದ ಮೇಲ್ ಹಂತದ ಕಚೇರಿವರೆಗೆ ಜಾರಿಗೆ ತರಬೇಕು. ಇಂದು ಶಿವಮೊಗ್ಗ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ವೇಳೆ ಇ-ಆಫೀಸ್ ಪರಿಣಾಕಾರಿಯಾಗಿ ಜಾರಿಯಾಗದ ಬಗ್ಗೆ ಗಮನಿಸಿದ್ದೇನೆ. ಜನಪರವಾದ ಮತ್ತು ವೇಗದ ಸೇವೆ ನೀಡಲು ಇ-ಆಫೀಸ್ ಅತ್ಯವಶ್ಯವಾಗಿದ್ದು ಜಿಲ್ಲಾಧಿಕಾರಿಗಳು ಇನ್ನು 15 ದಿನಗಳಲ್ಲಿ ಅನುಷ್ಟಾನಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ ಎಂದರು.

 ನೋಂದಣಿ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಮಾತನಾಡಿದ ಸಚಿವರು, ಇಲಾಖೆಯಲ್ಲಿ ಸುಮಾರು ಐದು ವರ್ಷಗಳಿಂದ ಮಾರುಕಟ್ಟೆ ಬೆಲೆ ಪರಿಷ್ಕರಣೆಯಾಗಿರಲಿಲ್ಲ. ಗೈಡೆನ್ಸ್ ದರ ಮತ್ತು ಮಾರುಕಟ್ಟೆ ದರಕ್ಕೆ ಸುಮಾರು ನಾಲ್ಕು ಪಟ್ಟು ವ್ಯತ್ಯಾಸವಿದೆ. ಗೈಡೆನ್ಸ್ ದರಕ್ಕಿಂತ ಮಾರುಕಟ್ಟೆ ದರ 3 ರಿಂದ 4 ನಾಲ್ಕು ಹೆಚ್ಚಿದೆ. ಈ ತಾರತಮ್ಯ ಸರಿಪರಿಸುವ ಪ್ರಕ್ರಿಯೆ ನಡೆಯುತ್ತಿದೆ. ಮಾರುಕಟ್ಟೆ ದರವನ್ನು ಪರಿಷ್ಕರಿಸಲಾಗಿದ್ದು, ಆಕ್ಷೇಪಣೆಗಳಿಗೆ ಆಹ್ವಾನ ನೀಡಲಾಗಿದೆ. ಈ ಕುರಿತು ಆಕ್ಷೇಪಣೆಗಳನ್ನು ಜನರು ಸಲ್ಲಿಸಬಹುದು. ನೋಂದಣಿ ಕಚೇರಿಯಲ್ಲಿ ಸರ್ವರ್ ಅಲ್ಲ ಬದಲಾಗಿ ನೆಟ್‍ವರ್ಕ್ ಸಮಸ್ಯೆ ಇದೆ ಎಂದ ಸಚಿವರು ಈ ಸಮಸ್ಯೆ ಬಗೆಹರಿಸುವ ಕುರಿತು ಅಧಿಕಾರಿಗೆ ಸೂಕ್ತ ಸೂಚನೆ ಮತ್ತು ಸಲಹೆಯನ್ನು ನೀಡಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular