ಉದ್ಯೋಗಾಕಾಂಕ್ಷಿಗಳಿಗೆ ಶುಭಸುದ್ದಿ : ಶೀಘ್ರವೇ 347 ʻಸರ್ವೇಯರ್ʼ ಹುದ್ದೆಗಳ ನೇಮಕಾತಿ

ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ರಾಜ್ಯದಲ್ಲಿ 347 ಸರ್ವೆಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 347 ಸರ್ವೆಯರ್ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಬೀಳಲಿದೆ. 592 ಸರ್ವೆಯರ್ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆಗೆ ತಾತ್ವಿಕ ಸಕಾರಾತ್ಮಕವಾಗಿ ಸ್ಪಂದಿಸಿ ಅನುಮೋದನೆಗೆ ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪರವಾನಗಿ ಪಡೆದ 748 ಸರ್ವೆಯರ್‌ಗಳಿಗೆ ತರಬೇತಿ ನೀಡಲಾಗಿದ್ದು, ಆಯಾ ಜಿಲ್ಲೆಗೆ ಅವಶ್ಯಕತೆ ಅನುಸಾರ ಕಳುಹಿಸಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read