ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 800 ಜನ ಆರೋಗ್ಯ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ

ಧಾರವಾಡ : ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರ ಮತ್ತು ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇದೆ, ಈಗ ಒಂದು ತಿಂಗಳೊಳಗಾಗಿ ಸುಮಾರು 800 ಜನ ಆರೋಗ್ಯ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ನೀಡಲಿದ್ದೆವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವಿವಿಧ ವಾರ್ಡಗಳ ಸೌಲಭ್ಯಗಳ ಪರಿಶೀಲನೆ ನಂತರ ಮಾತನಾಡಿದರು.  1500 ವೈದ್ಯರ ಮತ್ತು 1500 ತಜ್ಞ ವೈದ್ಯರ ಹುದ್ದೆಗಳು ಖಾಲಿ ಇದ್ದು, ಎಂ.ಬಿ.ಬಿ.ಎಸ್., ಎಂ.ಡಿ ಆಗಿರುವ ಪದವಿಧರರ ನೇಮಕಾತಿಗಾಗಿ ಕೌನ್ಸಿಲಿಂಗ್ ಆರಂಭಿಸಲಾಗಿದೆ, ಸದ್ಯದಲ್ಲಿ ಅವರನ್ನು ಗ್ರಾಮೀಣ ಭಾಗದ ಎಲ್ಲ ಆಸ್ಪತ್ರೆಗಳಿಗೆ ನೇಮಕ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಆರೋಗ್ಯ ಸೇವೆಗಳ ಉನ್ನತಿಕರಣಗೊಳಿಸಲು ಮತ್ತು ಎಲ್ಲ ಆಸ್ಪತ್ರೆಗಳನ್ನು ವಿವಿಧ ಹಂತಗಳಲ್ಲಿ ಮೇಲದರ್ಜೆಗೆ ಎರಿಸಲು ಆಧ್ಯತೆ ನೀಡಲಾಗುತ್ತೆದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read