HomeKarnatakaಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 8,600 ಸಾರಿಗೆ ಸಿಬ್ಬಂದಿಗಳ ನೇಮಕ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 8,600 ಸಾರಿಗೆ ಸಿಬ್ಬಂದಿಗಳ ನೇಮಕ

ಅರಸೀಕೆರೆ : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 8, 600 ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಸ್ ಆರ್ ಟಿಸಿಯಲ್ಲಿ 2016 ರಿಂದ ನೇಮಕ ಪ್ರಕ್ರಿಯೆ ನಡೆದಿಲ್ಲ. ಅಲ್ಲಿಂದ ಇಲ್ಲಿಯವರೆಗೆ 3,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಒಟ್ಟಾರೆ 13 ಸಾವಿರ ಸಿಬ್ಬಂದಿ ನೇಮಕಕ್ಕೆ ಅನುಮತಿ ಕೇಳಿದ್ದೆವು. ಆದರೆ 8,500 ಹುದ್ದೆ ನೇಮಕಕ್ಕೆ ಅನುಮೋದನೆ ಸಿಕ್ಕಿದ್ದು, ಶೀಘ್ರವೇ ನೇಮಕಾತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ವಿಮೆ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷರೂ.ಗೆ ಏರಿಕೆ ಮಾಡಲಾದ್ದು, ನವೆಂಬರ್ 1 ರಿಂದ ಜಾರಿಗೆ ಬಂದಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular