HomeKarnatakaಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 9 ಸಾವಿರ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಕಳೆದ 7 ವರ್ಷಗಳಿಂದ ನೇಮಕಾತಿ ಆಗಿಲ್ಲ. ಈ ಅವಧಿಯಲ್ಲಿ 13 ಸಾವಿರ ಸಿಬ್ಬಂದಿ ನಿವೃತ್ತಿಯಾಗಲಿದ್ದು,9 ಸಾವಿರ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು 4 ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 5,500 ಹೊಸ ಬಸ್‌ ಗಳ ಖರೀದಿಗೂ ಕ್ರಮ ಕೈಗೊಳ್ಳಲಾಗುತ್ತಿದೆ.  ನಮ್ಮ ಸರ್ಕಾರ ಇಡೀ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿದೆ. ಸಾರಿಗೆ  ಸಂಸ್ಥೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular