HomeKarnatakaJOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ; ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ರಾಜ್ಯ...

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ; ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಕ್ರಮ..!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ ಬ್ಯಾಕ್ ಲಾಕ್ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕೋರ್ಟ್ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾತನಾಡಿದ ಸಚಿವರು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು, ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪ್ರಗತಿ ಪರಿಶೀಲಿಸುವಂತೆ ನಿರ್ದೇಶನ ನೀಡಿದರು.

ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬ ಮಾಡಿದ್ರೆ ಹಾಗೂ ಈ ಬಗ್ಗೆ ನಿರ್ಲಕ್ಷ್ಯ ತೋರಿದರೆ ಅಂತಹ ಇಲಾಖೆಗಳ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು. ಸರ್ಕಾರದ ಸೂಚನೆ ಮತ್ತು ನ್ಯಾಯಾಲಯದ ಆದೇಶದ ಹೊರತಾಗಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular