ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಕಲ್ಯಾಣ ಕರ್ನಾಟಕ’ ಭಾಗದಲ್ಲಿ 51 ಫೆಲೋಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲೂಕುಗಳಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ‘ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ.

ಆಯ್ಕೆಯಾದ ಫೆಲೋಗಳಿಗೆ ಮಾಸಿಕ 60,000 ರೂ. ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಸುವವರು ಈ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.

ಅರ್ಹತೆಗಳು
* ವಯಸ್ಸು 32 ವರ್ಷಕ್ಕಿಂತ ಕಡಿಮೆ ಇರಬೇಕು
* ಸಾಮಾಜಿಕ ವಿಜ್ಞಾನ ಕ್ಷೇತ್ರಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು
* ಕಲ್ಯಾಣ ಕರ್ನಾಟಕ ಜಿಲ್ಲೆಗಳ ಪ್ರತಿ ತಾಲೂಕಿಗೆ ಒಬ್ಬ ಫೆಲೋಗಳಂತೆ ಒಟ್ಟು 51 ಫೆಲೋಗಳ ನೇಮಕಾತಿ ಮಾಡಿಕೊಳ್ಳಲಾಗುವುದು
* ಸಂಭಾವನೆ
ಪ್ರಯಾಣ ಭತ್ಯೆ ಸೇರಿ 61,500
ಕನ್ನಡ ಭಾಷಾಜ್ಞಾನ ಕಡ್ಡಾಯ (ಮಾತನಾಡುವುದು, ಓದುವುದು ಮತ್ತು ಬರೆಯುವುದು)

ಅರ್ಹತೆಯ ಮಾನದಂಡಗಳು

1-2 ವರ್ಷಗಳ ಕ್ಷೇತ್ರ ಅನುಭವ ಹೊಂದಿರುವ ಪದವೀಧರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಕ್ಷೇತ್ರದ ಅನುಭವ ಹೊಂದಿರುವ ಸ್ನಾತಕ ಪದವೀಧರರಿಗೆ ಆದ್ಯತೆ (M.phil & D.Phil ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾಶಸ್ತ್ರವಿದೆ)

ಕಲ್ಯಾಣ ಕರ್ನಾಟಕ ಪ್ರದೇಶದ ಯಾವುದೇ ತಾಲೂಕಿನಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು

ಆಯ್ಕೆಯ ವಿಧಾನ

ಕಾರ್ಯಾವಧಿ 2 ವರ್ಷಗಳು
ಫೆಲೋಗಳನ್ನು ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read