HomeKarnatakaಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56,432 ಹುದ್ದೆಗಳ ನೇರ ನೇಮಕಾತಿಗೆ ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56,432 ಹುದ್ದೆಗಳ ನೇರ ನೇಮಕಾತಿಗೆ ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಉಚ್ಚ ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮುಂದುವರೆಸಲು ದಿ.27.04.2026ರಂದು ಸರ್ಕಾರವು ಆದೇಶಿಸಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಉಚ್ಚ ನ್ಯಾಯಾಲಯವು ನೀಡಿರುವ ಆದೇಶದನ್ವಯ ಶೇ.50 ಮೀಸಲಾತಿ ಪ್ರಮಾಣವನ್ನು ತಾತ್ಕಾಲಿಕವಾಗಿ ಅಳವಡಿಸಿಕೊಂಡು ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಶೇ.15 ಮೀಸಲಾತಿಯಲ್ಲಿ ಪ್ರವರ್ಗ – ಎ, ಪ್ರವರ್ಗ- ಬಿ, ಪ್ರವರ್ಗ – ಸಿ ಗಳಿಗೆ ಒಳಮೀಸಲಾತಿಯನ್ನು ಕ್ರಮವಾಗಿ ಶೇ.5.25, 5.25, 4.5 ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ. ಪ್ರವರ್ಗ – ಸಿಗೆ ಲಭ್ಯವಾಗುವ ಹುದ್ದೆಗಳಲ್ಲಿ/ಪ್ರವೇಶಾತಿ ಸೀಟುಗಳಲ್ಲಿ ಶೇ.20ರಷ್ಟು ಹುದ್ದೆಗಳನ್ನು ಪರಿಶಿಷ್ಟ ಜಾತಿಗಳಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲಾಗಿದೆ.

ಈಗಾಗಲೇ ಆರ್ಥಿಕ ಇಲಾಖೆಯು ಅನುಮೋದನೆಯನ್ನು ನೀಡಿರುವ 56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಾದ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲ ಉದ್ಯೋಗಾಕಾಂಕ್ಷಿಗಳೊಂದಿಗೆ  ಹಂಚಿಕೊಳ್ಳಲು ನನಗೆ ಅತೀವ ಸಂತೋಷವಾಗುತ್ತಿದೆ. ನಮ್ಮ ಸರ್ಕಾರವು ಒಳಮೀಸಲಾತಿ ವಿಚಾರದಲ್ಲಿ ನುಡಿದಂತೆ ನಡೆದಿದ್ದು, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ತತ್ವದೆಡೆಗಿನ ತನ್ನ ಬದ್ಧತೆಯನ್ನು ಎತ್ತಿಹಿಡಿಯುವ ಮೂಲಕ ರಾಜ್ಯದ ಜನತೆಯ ವಿಶ್ವಾಸಕ್ಕೆ ಮುಕ್ಕಾಗದಂತೆ ನಡೆದುಕೊಂಡಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular