ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಡಿ. 20 ರಂದು ದಾವಣಗೆರೆಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ |JOB FAIR

ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಡಿಸೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ 51, ಡಿ.ಸಿ.ಆಫೀಸ್, ದಾವಣಗೆರೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್ನೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:8105122556, 08192-259446ನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read