HomeKarnatakaಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಸೆ.11 ರಂದು ಈ ಹುದ್ದೆಗಳಿಗೆ ನೇರ ಸಂದರ್ಶನ

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಸೆ.11 ರಂದು ಈ ಹುದ್ದೆಗಳಿಗೆ ನೇರ ಸಂದರ್ಶನ

ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ‘ಜಿಲ್ಲಾ ಮಹಿಳಾ ಸಬಲೀಕರಣ ಘಟಕ’ಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಜಿಲ್ಲಾಧಿಕಾರಿರವರ ಅನುಮೋದನೆಯಂತೆ ಸೆಪ್ಟೆಂಬರ್, 11 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಿಷನ್ ಸಂಯೋಜಕರ, ಪ್ರಧಾನ ಮಂತ್ರಿ ಮಾತೃವಂದನಾ ಜಿಲ್ಲಾ ಸಂಯೋಜಕರು ಹಾಗೂ ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕರ ಹುದ್ದೆಗೆ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಮಡಿಕೇರಿ ಇಲ್ಲಿ ಸಂದರ್ಶನ ನಡೆಯಲಿದೆ.

ಆದ್ದರಿಂದ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸೆಪ್ಟೆಂಬರ್, 11 ರಂದು ಸಂದರ್ಶನಕ್ಕೆ 30 ನಿಮಿಷ ಮುಂಚೆ ಹಾಜರಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-224451 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular