HomeJobs10ನೇ ತರಗತಿಯಿಂದ ಎಂಜಿನಿಯರಿಂಗ್ ಪದವಿಯವರೆಗಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ

10ನೇ ತರಗತಿಯಿಂದ ಎಂಜಿನಿಯರಿಂಗ್ ಪದವಿಯವರೆಗಿನ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ

10ನೇ ತರಗತಿಯಿಂದ ಎಂಜಿನಿಯರಿಂಗ್ ಪದವಿಯವರೆಗೆ ತಮ್ಮ ಶೈಕ್ಷಣಿಕ ಅರ್ಹತೆಗಳಿಗೆ ಅನುಗುಣವಾಗಿ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಪಡೆಯಲು ಸುವರ್ಣಾವಕಾಶ ಕಲ್ಪಿಸಲಾಗಿದೆ. ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಜುಲೈ 29ರಂದು ಕಲಬುರಗಿ ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಹಲವು ಬಹುರಾಷ್ಟ್ರೀಯ ಕಂಪನಿಗಳು ಮತ್ತು ವಿವಿಧ ವಲಯಗಳ ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸಲಿದ್ದು, ನಿಮ್ಮ ಕನಸಿನ ಉದ್ಯೋಗ ಪಡೆಯಲು ತಪ್ಪದೇ ಭಾಗವಹಿಸಿ.

ಉದ್ಯೋಗಾಕಾಂಕ್ಷಿಗಳಿಗೆ ನೋಂದಣಿ ಲಿಂಕ್‌ಗಳು:

ಅರ್ಹ ಅಭ್ಯರ್ಥಿಗಳು ಮುಂಚಿತವಾಗಿಯೇ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

10ನೇ, 12ನೇ, ಐಟಿಐ, ಡಿಪ್ಲೊಮಾ, ಬಿ.ಸಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಎ. ಅಭ್ಯರ್ಥಿಗಳು https://forms.gle/nn7fZro6hMctptgD6 ಇಲ್ಲಿ ನೋಂದಾಯಿಸಿಕೊಳ್ಳಬೇಕು.

ಬಿ.ಇ (ಎಂಜಿನಿಯರಿಂಗ್) ಅಭ್ಯರ್ಥಿಗಳು https://forms.gle/7MMtsNin9rySAcgBA ಇಲ್ಲಿ ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 91481 30287, 63663 52281 ಸಂಪರ್ಕಿಸಬಹುದು. ಯುವಜನರ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿ ಗ್ಯಾರಂಟಿ ಸರ್ಕಾರದ ಪ್ರಮುಖ ಆದ್ಯತೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ: ನೇರ ಸಂರ್ದಶನ

 ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ  ಜುಲೈ 29 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

10 ನೇ ತರಗತಿ ಉತ್ತೀರ್ಣ, ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 35 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಓ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 8970615380 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular