HomeLatest NewsJOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಮೇ. 16 ರಂದು ಮಡಿಕೇರಿಯಲ್ಲಿ...

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಮೇ. 16 ರಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಾಟೆಕ್, ಮಡಿಕೇರಿ, ಇಬ್ಬನಿ ರೆಸಾಟ್ರ್ಸ್, ಮಡಿಕೇರಿ ಹಾಗೂ ಕ್ಲಬ್‍ಮಹೀಂದ್ರ ರೆಸಾಟ್ರ್ಸ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್-8296020826 ನ್ನು ಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular