HomeLatest NewsJOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬಳ್ಳಾರಿಯಲ್ಲಿ 'ಉದ್ಯೋಗ...

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬಳ್ಳಾರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು.18 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ನಗರದ ಸ್ಪಂದನ ಸ್ಫೂರ್ತಿ ಮೈಕ್ರೋಫೈನಾನ್ಸ್ ಕಂಪನಿಯವರು ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳುವರು. ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.

ವಿದ್ಯಾರ್ಹತೆ:
ಪಿಯುಸಿ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular