HomeKarnatakaಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ʻKSRTCʼ 300 ತಾಂತ್ರಿಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮರುಚಾಲನೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ʻKSRTCʼ 300 ತಾಂತ್ರಿಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮರುಚಾಲನೆ

ಬೆಂಗಳೂರು :ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೋವಿಡ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಮರುಚಾಲನೆ ನೀಡಲಾಗಿದೆ.

ಕೋವಿಡ್‌ ಹಿನ್ನೆಲೆ ಸ್ಥಗಿತಗೊಂಡಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಮರುಚಾಲನೆ ನೀಡಲಾಗಿದೆ. 2020ರ ಫೆಬ್ರವರಿ 2ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಕನಿಷ್ಠ 30 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳಿಗೆ ಇದೇ ಡಿಸೆಂಬರ್‌ 26ರಿಂದ 28ರವರೆಗೆ ಶಾಂತಿನಗರದಲ್ಲಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಆವರಣದಲ್ಲಿ ದಾಖಲಾತಿ/ದೇಹದಾರ್ಢ್ಯ ಪರಿಶೀಲನೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular