ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏಪ್ರಿಲ್, 27 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಪಾಕ್ಸ್ಕಾನ್(ಎಫ್ಒಎಕ್ಸ್ಸಿಒಎನ್ಎನ್), ಬೆಂಗಳೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ನೇರ ಸಂದರ್ಶನದಲ್ಲಿ ಪಾಕ್ಸ್ಕಾನ್(ಎಫ್ಒಎಕ್ಸ್ಸಿಒಎನ್ಎನ್), ಕಂಪನಿ, ಬೆಂಗಳೂರು ಇವರು ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.
ಕಾಲೇಜುಗಳಿಗೆ ಪ್ರವೇಶಾತಿ ಆರಂಭ
ಮಡಿಕೇರಿ : ಪ್ರಸಕ್ತ (2026-27) ಸಾಲಿನ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು/ ಅಟಲ್ ಬಿಹಾರಿ ವಾಜಪೇಯಿ ಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
ಅದರಂತೆ ಅರ್ಹ ವಿದ್ಯಾರ್ಥಿಗಳು/ಪೋಷಕರು ಅರ್ಜಿಯನ್ನು ಕೇವಲ ಆನ್ಲೈನ್ ಮೂಲಕ ಕೆಆರ್ಇಐಎಸ್ ಸಂಸ್ಥೆಯ ವೆಬ್ಸೈಟ್ https://kreis.karnataka.gov.in ರಲ್ಲಿ ಏಪ್ರಿಲ್, 29 ರೊಳಗೆ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ವಿಶೇಷ ವರ್ಗದ ಪ್ರಮಾಣ ಪತ್ರ (ಇದ್ದರೆ) ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಭಾಗಮಂಡಲ, ಮಡಿಕೇರಿ ತಾಲ್ಲೂಕು-ದೂ. 9611307646. ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಗರಗಂದೂರು, ಸೋಮವಾರಪೇಟೆ ತಾಲ್ಲೂಕು-ದೂ. 8105657451. ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಬಸವನಹಳ್ಳಿ, ಕುಶಾಲನಗರ ತಾಲ್ಲೂಕು-ದೂ. 9845659909 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

