HomeKarnatakaಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಏ.24 ರಂದು ನೇರ ಸಂದರ್ಶನ

ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಏ.24 ರಂದು ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಎಪ್ಸಿಲಾನ್ ಕಾರ್ಬನ್ ಫ್ರೈ.ಲಿ. ಮತ್ತು ಧ್ರುವ ಸೋಲಾರ್ ಪವರ್ ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.

ವಿದ್ಯಾರ್ಹತೆ: ಐಟಿಐ (ಫಿಟ್ಟರ್) ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿ (ಬಯೋಡೇಟಾ) ಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular