ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ ‘HP’ ಕಂಪನಿಯಿಂದ 4 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ರಾಜ್ಯದಲ್ಲಿ ಉದ್ಯೋಗ ಸೃಷ್ಟಿ, ಬಂಡವಾಳ ಹೂಡಿಕೆ ವೃದ್ಧಿಸುವ ಗುರಿಯೊಂದಿಗೆ ಕೈಗೊಂಡಿರುವ ದಾವೂಸ್ ಪ್ರವಾಸವು ಯಶಸ್ವಿಯಾಗಿ ಸಾಗಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವರು ಎಚ್.ಪಿ., ಆ್ಯಬ್ ಇನ್ಬೇವ್ ಬ್ರೂವರೀಸ್, ಎಚ್.ಸಿ.ಎಲ್, ಗೆನಾತ್ರಿ (ಪೆಟ್ರೋನಾಸ್), ಎನ್.ಟಿ.ಟಿ. ಡೇಟಾ, ಸಿಸ್ಕೋ, ಸ್ವಿಗ್ಗಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳೊಂದಿಗೆ ಮಾತುಕತೆ ನಡೆಸಿ, ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಿದ್ದೇವೆ ಎಂದರು.

#ABInBev ಇಂಡಿಯಾ ಕಂಪನಿಯು ತನ್ನ ಉತ್ಪಾದನೆ ಹೆಚ್ಚಿಸಲು 400 ಕೋಟಿ ರೂ. ಹೂಡಲು ಒಪ್ಪಿಕೊಂಡಿದೆ. ಈಗಾಗಲೇ 900 ಮಿಲಿಯನ್ ಡಾಲರ್ ಹೂಡಿಕೆ ಮಾಡಿರುವ ಎನ್.ಟಿ.ಟಿ. ಡೇಟಾ ಕಂಪನಿಯು ಮುಂಬರುವ ವರ್ಷಗಳಲ್ಲಿ ಇನ್ನೂ 2 ಬಿಲಿಯನ್ ಡಾಲರ್ ಬಂಡವಾಳ ತೊಡಗಿಸಲು ತೀರ್ಮಾನಿಸಿದೆ ಎಂದರು.

#Hp ಕಂಪನಿಯು ಅಧಿಕವಾಗಿ 4 ಸಾವಿರಕ್ಕೂ ಹೆಚ್ಚುಉದ್ಯೋಗಗಳನ್ನು ಸೃಷ್ಟಿಸಲು ನಿರ್ಧರಿಸಿದ್ದು, ಬೆಂಗಳೂರಿನ ಮಹದೇವಪುರದಲ್ಲಿ ಹೊಸದಾಗಿ 2 ಸುಸಜ್ಜಿತ ಕಚೇರಿಗಳನ್ನು ಆರಂಭಿಸಲಿದೆ.ಪೆಟ್ರೋನಾಸ್ (ಗೆನಾತ್ರಿ) ಕಂಪನಿಯು ಶುದ್ಧ ಇಂಧನ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದು, ಈ ವರ್ಷಾಂತ್ಯಕ್ಕೆ 30 ಗಿಗಾವ್ಯಾಟ್ ಇಂಧನ ತಯಾರಿಸುವ ಗುರಿ ಹೊಂದಿದೆ ಎಂದರು.

ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಸಿಸ್ಕೋ, ನಗರ ಸಂಚಾರ ವ್ಯವಸ್ಥೆಯೊಂದಿಗೆ ಸ್ವಿಗ್ಗಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರದಲ್ಲಿ ವೋಲ್ವೋ ಕಂಪನಿಗಳು ಹೆಚ್ಚಿನ ಬಂಡವಾಳ ಹೂಡಲು ಮುಂದೆ ಬಂದಿವೆ.ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿ ರಾಜ್ಯವನ್ನಾಗಿ ಮಾಡುವ ನಮ್ಮ ಪ್ರಯತ್ನ ನಿರಂತರವಾಗಿ ಮುಂದುವರೆದಿದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read