HomeJobsಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಪದವಿ ಹೊಂದಿದವರಿಗೆ ಅವಕಾಶ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಪದವಿ ಹೊಂದಿದವರಿಗೆ ಅವಕಾಶ

ಕೊಪ್ಪಳದ ತಿಕೋಟಿಕರ್ ಪೆಟ್ರೋಲ್ ಬಂಕ್ ಹತ್ತಿರದ ಟೈಗರ್ ಕ್ಯಾಪಿಟಲ್ ಪ್ರೈ. ಲಿ. ವತಿಯಿಂದ ಫೆಬ್ರವರಿ 12 ರಂದು ಬೆಳಿಗ್ಗೆ 9 ಗಂಟೆಯಿAದ 1 ಗಂಟೆಯವರೆಗೆ ವಾಕ್ ಇನ್ ಇಂಟರ್‌ವ್ಯೂವ್ ಆಯೋಜಿಸಲಾಗಿದೆ.

ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗೆ ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕುಕನೂರು, ಗಂಗಾವತಿ ತಾಲ್ಲೂಕುಗಳಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 30 ವರ್ಷ ನಿರುದ್ಯೋಗಿ ಯುವಕರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ(ರೆಸುಮ್) ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿದ್ದು, ಯಾವುದೇ ಶುಲ್ಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular