ಬೆಂಗಳೂರು: 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ(KPSC) ರಾಜ್ಯ ಸರ್ಕಾರ ಪ್ರಸ್ತಾವನೆ ಕಳುಹಿಸಿದೆ.
2026 -27 ನೇ ಸಾಲಿನಲ್ಲಿ 39 ಕೆಎಎಸ್ ಹುದ್ದೆಗಳು, ಗ್ರೂಪ್ ಎ 117, ಗ್ರೂಪ್ ಬಿ 202 ಹುದ್ದೆ ಒಳಗೊಂಡಂತೆ ಒಟ್ಟು 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಕಳುಹಿಸಲಾಗಿದೆ.
ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮಗಳ ಅನ್ವಯ ಹುದ್ದೆಗಳ ವರ್ಗೀಕರಣ ಮಾಡಿ, ನೇಮಕಾತಿ ಆಯ್ಕೆ ಪ್ರಕ್ರಿಯೆ ಕೈಗೊಳ್ಳಬೇಕು. ಈ ಖಾಲಿ ಹುದ್ದೆಗಳು ತಾತ್ಕಾಲಿಕವಾಗಿದ್ದು, ಬದಲಾವಣೆಯಾಗಬಹುದು. ಮೀಸಲಾತಿ ವರ್ಗೀಕರಣ ಕೂಡ ಬದಲಾವಣೆ ಆಗಬಹುದು ಎನ್ನಲಾಗಿದೆ. ನಿಯಮಗಳ ಅನ್ವಯ ಸೂಕ್ತ ಷರತ್ತು ಅಳವಡಿಸಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಕೆಪಿಎಸ್ಸಿ ಕಾರ್ಯದರ್ಶಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

