ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಖಾಸಗಿ ಕಂಪನಿಯಾದ ಸಂಭವ್ ಫೌಂಡೇಷನ್, ಮಡಿಕೇರಿ, ಇವರು ಉಚಿತ ತರಬೇತಿಯೊಂದಿಗೆ ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದಾರೆ.
ನೇರ ಸಂದರ್ಶನವು ಸೆಪ್ಟೆಂಬರ್, 11 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು 1 ಸೆಟ್ ಸ್ವವಿವರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಗೆ ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.