HomeKarnatakaJOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ.20 ರಂದು ಬೆಂಗಳೂರಿನಲ್ಲಿ 'ಉದ್ಯೋಗ...

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ.20 ರಂದು ಬೆಂಗಳೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು :  ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆಎಲ್ಇ. ಸಂಸ್ಥೆಯ ಎಸ್ ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10, ಇಲ್ಲಿ ಅಕ್ಟೋಬರ್, 20 ರಂದು “ಉದ್ಯೋಗ ಮೇಳ” ನಡೆಯಲಿದೆ.

ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತರು ಬೃಹತ್ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು https://jobfair.calicut.nielit.in/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ಕೋರಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular