HomeKarnatakaರಾಜ್ಯ ಸರ್ಕಾರದಿಂದ SC/ST ಸಮುದಾಯದ ಪತ್ರಕರ್ತರಿಗೆ ಗುಡ್ ನ್ಯೂಸ್ : ಮೋ-ಜೋ ಕಿಟ್ ನೀಡಲು ಅರ್ಜಿ...

ರಾಜ್ಯ ಸರ್ಕಾರದಿಂದ SC/ST ಸಮುದಾಯದ ಪತ್ರಕರ್ತರಿಗೆ ಗುಡ್ ನ್ಯೂಸ್ : ಮೋ-ಜೋ ಕಿಟ್ ನೀಡಲು ಅರ್ಜಿ ಆಹ್ವಾನ.!

ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಮೋ-ಜೋ ಕಿಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ, ಪರಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.

ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಗಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು.
ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿAದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು. ಸರ್ಕಾರದ ವಿವಿಧ ಸಮಿತಿ/ಸಂಸ್ಥೆಗಳಿಗೆ ನೇಮಕ ಮಾಡಿದ ನಾಮ ನಿರ್ದೇಶಿತ ಸದಸ್ಯರುಗಳನ್ನು ಪರಿಗಣಿಸಲಾಗುವುದಿಲ್ಲ.ಅಭ್ಯರ್ಥಿಗಳು ಸ್ವಯಂ ಅರ್ಜಿಗಳೊಂದಿಗೆ ಪೂರಕ ದಾಖಲೆಗಳನ್ನು ಮಾ.20 ರೊಳಗಾಗಿ ಇ-ಮೇಲ್ ವಿಳಾಸ: [email protected] ಗೆ ಸಲ್ಲಿಸಬೇಕು ಅಥವಾ ಅಂಚೆ ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ||. ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಅರ್ಜಿಗಳನ್ನು ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular