BIG NEWS : ರಾಜ್ಯದ ಪತ್ರಕರ್ತರಿಗೆ ಗುಡ್ ನ್ಯೂಸ್ : ಮಹತ್ವದ ಕೊಡುಗೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ದಾವಣಗೆರೆ : ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದು, ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

1) ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪ್ರಯಾಣ : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

2) ಪತ್ರಕರ್ತರು ನಿಧನ ಹೊಂದಿದಾಗ ಸರ್ಕಾರದಿಂದ ಅವರ ಕುಟುಂಬಕ್ಕೆ ನೀಡುತ್ತಿದ್ದ ಮಾಶಾಸನವನ್ನು ಮಾಸಿಕ ರೂ 3,000 ದಿಂದ ರೂ. 6,000 ಗಳಿಗೆ ಹೆಚ್ಚಳ  ಮಾಡಲಾಗುತ್ತದೆ ಎಂದರು.

ಪತ್ರಿಕಾವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read