HomeKarnatakaಕಾಡುಗೊಲ್ಲ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಾಡುಗೊಲ್ಲ ಸಮುದಾಯಕ್ಕೆ ಗುಡ್ ನ್ಯೂಸ್ ; ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಈ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರಿಂದ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ವಯೋಮಿತಿ 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ, ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಅರಿವು ಯೋಜನೆಯಡಿ ವಯೋಮಿತಿ 18 ರಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ.3.50 ಲಕ್ಷಗಳು, ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿದಾರರು ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷ ಮಿತಿಯಲ್ಲಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.18 ಮೀಸಲಾತಿ ಇರಿಸಿದೆ.

ಅರ್ಜಿದಾರರು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು(ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಗಳು). ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಡಿ ಅರ್ಜಿ ಸಲ್ಲಿಸಬಹುದು.
ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ.

ಕೊಡಗು ಜಿಲ್ಲೆಯಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕೊಡಗು ಜಿಲ್ಲಾ ಕಚೇರಿಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ದೂ.ಸಂ. 08272-221656 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular