ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್ : 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳ ಅನುಷ್ಠಾನಕ್ಕೆ ಸೂಚನೆ

ಬೆಂಗಳೂರು : ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ಸಾಲಿನ ಕ್ರಿಯಾ ಯೋಜನೆಯನ್ನು ತ್ವರಿತವಾಗಿ ಜಾರಿ ಮಾಡುವ ಮೂಲಕ ಮಾರ್ಚ್ ಅಂತ್ಯದೊಳಗೆ ಅಂದಾಜು ಒಂದು ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳ ಅನುಷ್ಠಾನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಕೆಲವು ಪ್ರಮುಖ ಸೂಚನೆಗಳು:

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು.

ಮಂಡಳಿಯಲ್ಲಿ ಪ್ರಸ್ತುತ ರೂ.2,106 ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ. ಇದಕ್ಕಾಗಿ ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು.

ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡಬೇಕು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಬೇಕು.

ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್ ಅಂತ್ಯದ ಒಳಗೆ ರೂಪಿಸಬೇಕು. ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ. 50 ಕ್ಕೂ ಹೆಚ್ಚಾಗಿ ವಾಸವಿರುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಬೇಕು.

ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು.

ಪ್ರಾಕೃತಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗವನ್ನು ರಾಜ್ಯದ ಇತರೆ ಜಿಲ್ಲೆಗಳ ಅಭಿವೃದ್ಧಿ ವೇಗಕ್ಕೆ ಸಮಾನವಾಗಿ ಮುನ್ನಡೆಸಿಕೊಂಡು ಹೋಗಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read