ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 2025- 26 ನೇ ಸಾಲಿಗೆ ಐಎಎಸ್, ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲಾಗುವುದು.
ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ನಡೆಸುವ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 22 ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಸಲು ಮೇ 18ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಜೊತೆಗೆ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಈ ಮೊದಲು ಪರೀಕ್ಷಾ ಶುಲ್ಕ ಪಾವತಿಸಿದ್ದಲ್ಲಿ ಅದನ್ನು ಹಿಂತಿರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.