HomeLatest Newsಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೆಎಎಸ್, ಐಎಎಸ್ ತರಬೇತಿ ಪರೀಕ್ಷಾ ಶುಲ್ಕದಿಂದ ವಿನಾಯಿತಿ

ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೆಎಎಸ್, ಐಎಎಸ್ ತರಬೇತಿ ಪರೀಕ್ಷಾ ಶುಲ್ಕದಿಂದ ವಿನಾಯಿತಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 2025- 26 ನೇ ಸಾಲಿಗೆ ಐಎಎಸ್, ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲಾಗುವುದು.

ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ನಡೆಸುವ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 22 ರವರೆಗೆ ದಿನಾಂಕ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಸಲು ಮೇ 18ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಜೊತೆಗೆ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಈ ಮೊದಲು ಪರೀಕ್ಷಾ ಶುಲ್ಕ ಪಾವತಿಸಿದ್ದಲ್ಲಿ ಅದನ್ನು ಹಿಂತಿರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular