HomeKarnatakaಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಕೈಗಾರಿಕೆಗಳಲ್ಲಿ ʻಶೇ.70-100 ರಷ್ಟುʼ ಉದ್ಯೋಗವಕಾಶ

ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಕೈಗಾರಿಕೆಗಳಲ್ಲಿ ʻಶೇ.70-100 ರಷ್ಟುʼ ಉದ್ಯೋಗವಕಾಶ

ಬೆಳಗಾವಿ : ಕನ್ನಡಿಗರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೈಗಾರಿಕಾ ನೀತಿಯಡಿ ಸರ್ಕಾರದ ಪ್ರೋತ್ಸಾಹ ಪಡೆಯುತ್ತಿರುವ ಕೈಗಾರಿಕೆಗಳಲ್ಲಿ ಶೇ 70-100 ರಷ್ಟು ಉದ್ಯೋಗವಕಾಶ ನೀಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೈಗಾರಿಕಾ ನೀತಿಯಡಿ ಸರ್ಕಾರದ ಪ್ರೋತ್ಸಾಹ, ರಿಯಾಯಿತಿ ಪಡೆದಿರುವ ಕೈಗಾರಿಕೆಗಳು ‘ಡಿ’ ಗ್ರೂಪ್‌ನಲ್ಲಿ ಶೇ 100 ರಷ್ಟು ಹಾಗೂ ಒಟ್ಟಾರೆ ಶೇ 70ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ನೀಡಬೇಕೆಂಬ ಷರತ್ತು ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳೊಂದಿಗೆ ₹ 1,275 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular