ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ʻSSC GD ಕಾನ್ಸ್ಟೇಬಲ್ ಪರೀಕ್ಷೆʼ ಬರೆಯಲು ಅವಕಾಶ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಕಾನ್ಸ್ಟೇಬಲ್ಗಳ ನೇಮಕಾತಿಗಾಗಿ ಕಾನ್ಸ್ಟೇಬಲ್ (ಜಿಡಿ) ಪರೀಕ್ಷೆಯನ್ನು ಮೊದಲ ಬಾರಿಗೆ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

ಎಸ್ಎಸ್ಸಿ ಕಾನ್ಸ್ಟೇಬಲ್ ಜಿಡಿ ನೇಮಕಾತಿ ಪರೀಕ್ಷೆ ಫೆಬ್ರವರಿ 20 ರಿಂದ ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿದೆ. 48 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 26,146 ಜಿಡಿ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಈ ನೇಮಕಾತಿ ಡ್ರೈವ್ ಹೊಂದಿದೆ.

ಎಸ್ಎಸ್ಸಿ ಕಾನ್ಸ್ಟೇಬಲ್ ಜಿಡಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಹಿಂದಿ ಮತ್ತು ಇಂಗ್ಲಿಷ್ ಹೊರತುಪಡಿಸಿ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒರಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಸಿದ್ಧಪಡಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

https://twitter.com/ANI/status/1756568538515439954?ref_src=twsrc%5Etfw%7Ctwcamp%5Etweetembed%7Ctwterm%5E1756568538515439954%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್ಸ್ಟೇಬಲ್ ಜಿಡಿ ನೇಮಕಾತಿ ಪರೀಕ್ಷೆ ಫೆಬ್ರವರಿ 20 ರಿಂದ ನಡೆಯಲಿದೆ. ಫೆಬ್ರವರಿ 20, 21, 22, 23, 24, 26, 27, 28, 29, ಮಾರ್ಚ್ 1, 5, 6, 7, 11 ಮತ್ತು 12 ರಂದು ಪರೀಕ್ಷೆ ನಡೆಯಲಿದೆ.

https://twitter.com/ANI/status/1756568856397566031?ref_src=twsrc%5Etfw%7Ctwcamp%5Etweetembed%7Ctwterm%5E1756568856397566031%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read